ಶ್ರೀ ಬಸವೇಶ್ವರ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

IMG-20230822-WA0079
Published on

ಕಟ್ಟೆಮಳಲವಾಡಿ: ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹರವೆ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಮಗ್ರ ಹಾಗೂ ವೈಯಕ್ತಿಕ ಪ್ರಶಸ್ತಿಯನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.


ಈ ವಿದ್ಯಾರ್ಥಿಗಳನ್ನು ಶಾಲೆ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾ ಮಹದೇವ್, ಮುಖ್ಯಶಿಕ್ಷಕ ಬಿ.ಆರ್.ಶೇಖರ್ ಹಾಗೂ ಸಹಶಿಕ್ಷಕರು ಅಭಿನಂದಿಸಿದ್ದಾರೆ.


ಬಾಲಕಿಯರ ವಿಭಾಗದಿಂದ ಖೋಖೋ ಸ್ಪರ್ಧೆಯಲ್ಲಿ ಪ್ರಥಮ, ಥ್ರೋಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 3000 ಮೀಟರ್ ಓಟದ ಸ್ಪರ್ಧೆಯಲ್ಲಿ ಎರಡನೇ ಸ್ಥಾನ, 1500 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 400 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ತಟ್ಟೆ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಭರ್ಜಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 800 ಮೀ.ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಬಾಲಕಿಯರು ಪಡೆದುಕೊಂಡಿದ್ದಾರೆ.


ಬಾಲಕರ ವಿಭಾಗ: ಥ್ರೋಬಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ರಿಲೇ ಸ್ಪರ್ಧಿಯಲ್ಲಿ ದ್ವಿತೀಯ ಸ್ಥಾನ, 3000 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 200 ಮೀ.ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 400 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, 800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ತಟ್ಟೆ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಭರ್ಜಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದು, ಶಾಲೆಯ ಮಕ್ಕಳು ಉತ್ತಮ ಅಂಕ ಪಡೆದು ಒಳ್ಳೆಯ ಫಲಿತಾಂಶ ನೀಡುವ ಜತೆಗೆ ಕ್ರೀಡೆಗಳಲ್ಲೂ ಭಾಗವಹಿಸಿ ಉತ್ತಮ ಪ್ರಶಸ್ತಿ ಪಡೆಯುವ ಮೂಲಕ ಶಾಲೆಗೆ ಗೌರವ ತಂದಿರುವುದು ಹೆಮ್ಮೆಯ ವಿಷಯ ಎಂದು ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net