

ಚಾಮರಾಜನಗರ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶ್ರೀಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶಿರಸಿ ಹಾಗೂ ಶ್ರೀಭಗವದ್ಗೀತಾ ಅಭಿಯಾನ ಸಮಿತಿ ಸಹಯೋಗದಲ್ಲಿ .17 ರಂದು ಶ್ರೀಭಗವದ್ಗೀತಾ ಅಭಿಯಾನ-2024 ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಅಭಿಯಾನ ಸಮಿತಿ ಗೌರವಾಧ್ಯಕ್ಷ ಗಣಪತಿ ಮಹಾದೇವ ಹೆಗಡೆ (ಜಿ.ಎಂ.ಹೆಗಡೆ)ತಿಳಿಸಿದರು.
ನಗರದ ಸೇವಾ ಭಾರತಿ ಶಾಲಾ ಆವರಣದಲ್ಲಿ ಬೆಳಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಟಿ.ನರಸೀಪುರ ಮುಡಕನಪುರದ ಶ್ರೀದೇಶಿಕೇಂದ್ರ ಷಡಕ್ಷರಿ ಸ್ವಾಮಿ ಸಾನಿಧ್ಯವಹಿಸುವರು. ಶ್ರೀಭಗವದ್ಗೀತಾ ಅಭಿಯಾನ ಸಮಿತಿ ಅಧ್ಯಕ್ಷ ದುಗ್ಗಹಟ್ಟಿ ಮಲ್ಲಿಕಾರ್ಜುನಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷ ಎಸ್.ಸುರೇಶ್ ಉದ್ಘಾಟನೆ ಮಾಡಲಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಅನಂತ ನಾಗೇಂದ್ರ ಭಟ್ ಹಿತ್ಲಳ್ಳಿ ಮುಖ್ಯ ಭಾಷಣ ಮಾಡುವರು. ಸೇವಾಭಾರತಿ ಶಿಕ್ಷಣ ಸಂಸ್ಥೆಯ ವಾಸುದೇವ್ ರಾವ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಶ್ರೀಭಗವದ್ಗೀತಾ ಅಭಿಯಾನ ಸಮಿತಿ ಕಾರ್ಯದರ್ಶಿ ಸುರೇಶ್ ಎನ್.ಋಗ್ವೇದಿ, ಖಜಾಂಚಿ ಎಸ್.ಬಾಲಸುಬ್ರಹ್ಮಣ್ಯ ಹಾಜರಿದ್ದರು.