ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

12sor4
ಸೊರಬದ ಪುರದೈವ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.
Published on

ಸೊರಬ: ಪಟ್ಟಣದ ಪುರದೈವ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ ಹಾಜಖಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು. ತಹಸೀಲ್ದಾರ್ ಮಂಜುಳಾ ಹೆಗಡಾಳ್ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಕಳಸಕ್ಕೆ ಬಾಳೆಹಣ್ಣು, ಉತ್ತುತ್ತಿ, ಕಾಳುಮೆಣಸು ಬೀರುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ರಥವು ಶಿಥಿಲವಾಗಿರುವುದರಿಂದ ತಜ್ಞರ ಸಲಹೆ ಮೇರೆಗೆ ದೇವಸ್ಥಾನದ ಮುಂಭಾಗದ ಕೆಲವೇ ದೂರ ಮಾತ್ರ ರಥವನ್ನು ಎಳೆಯಲಾಯಿತು.

ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ಒದಗಿಸಲಾಗಿತ್ತು. ರಥೋತ್ಸವದ ಅಂಗವಾಗಿ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ಹಿರೇಶಕುನ ಗ್ರಾಮಸ್ಥರು ರಥ ಕಟ್ಟುವ ಕಾರ್ಯ ಹಾಗೂ ಹಳೇ ಸೊರಬ ಗ್ರಾಮಸ್ಥರು ಚಪ್ಪರ ಸೇವೆ, ಸೊಪ್ಪಿನ ಕೇರಿಯ ದೇವಾಂಗ ಸಮುದಾಯದವರು ಹಾಜಖಿ ಮಡಿವಾಳ ಸಮುದಾಯದವರು ಪೂಜಾಕಾರ್ಯ, ಪಲ್ಲಕ್ಕಿ ಉತ್ಸವಕ್ಕೆ ಸಹಕಾರ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net