

ರಾಯಚೂರು
ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 351ನೇ ಆರಾಧನೆ ಮಹೋತ್ಸವದ ಪೂರ್ವಾರಾಧನೆ ನಿಮಿತ್ತ ರಾಯರ ಮೂಲ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ.
ಶ್ರೀರಂಗಂನ ರಂಗನಾಥ ದೇವಸ್ಥಾನದಿಂದ ತರಲಾದ ಶೇಷ ವಸ್ತ್ರವನ್ನು ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಸ್ವೀಕರಿಸಿ ರಾಯರಿಗೆ ಸಮರ್ಪಿಸಿದರು.
ನಂತರ ಶ್ರೀಗಳಿಂದ ಮೂಲರಾಮದೇವರ ಪೂಜೆ ನೆರವೇರಿಸಲಾಯಿತು. ದೇಶದ ವಿವಿಧೆಡೆಯಿಂದ ಆಗಮಿಸಿರುವ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.