ಶ್ರೀ ರಾಮೇಶ್ವರ ರಥೋತ್ಸವ ಸಂಭ್ರಮ

30ark3
Published on

ಅರಕಲಗೂಡು: ತಾಲೂಕಿನ ರಾಮನಾಥಪುರದ ಐತಿಹಾಸಿಕ ಶ್ರೀ ರಾಮೇಶ್ವರ ದೇವಾಲಯದ ದಿವ್ಯ ರಥೋತ್ಸವ ಬುಧವಾರ ಸಂಭ್ರಮದಿಂದ ಜರುಗಿತು.

ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಮೂಲ ದೇವರಿಗೆ ಅಭಿಷೇಕ, ಬಿಲ್ವಾರ್ಚನೆ, ವಿವಿಧ ಪೂಜಾ ಕಾರ್ಯಗಳು ವಿಧಿವತ್ತಾಗಿ ನಡೆದವು. ಮಧ್ಯಾಹ್ನ ದೇಗುಲ ಮುಂಭಾಗ ಅಲಕೃಂತ ರಥದ ಮೇಲೆ ದೇವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಿದ ಬಳಿಕ ಭಕ್ತರು ಜಯಘೋಷಗಳೊಂದಿಗೆ ರಥ ಎಳೆದು ಸಂಭ್ರಮಿಸಿದರು.

ರಥ ಬೀದಿಯಲ್ಲಿ ಸಾಗಿದ ರಥ ಮತ್ತೆ ಸ್ವಸ್ಥಾನಕ್ಕೆ ಎಳೆದು ತಂದು ನಿಲ್ಲಿಸಲಾಯಿತು. ಭಕ್ತರು ದೇವಸ್ಥಾನದಲ್ಲಿ ಪ್ರಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಶಾಸಕ ಎ.ಮಂಜು, ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಸಿ.ಸ್ವಾಮಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net