ಶ್ರೀ ವಿಶ್ವಕರ್ಮ ಮಹೋತ್ಸವ, 17ಕ್ಕೆ

IMG-20220914-WA0045.jpg
Published on

ದಾವಣಗೆರೆ: ನಗರದ ಕಾಳಿಕಾದೇವಿ ರಸ್ತೆಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಸೆ.17 ರಂದು ಭಗವಾನ್ ಶ್ರೀ ವಿಶ್ವಕರ್ಮ ಮಹೋತ್ಸವ ನಡೆಯಲಿದೆ.

ಜಿಲ್ಲಾ ವಿಶ್ವಕರ್ಮ ಸಮಾಜ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾನಂದ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಗ್ಗೆ 5 ಗಂಟೆಗೆ ಶ್ರೀ ವಿಶ್ವಕರ್ಮ ಹೋಮ ನಡೆಯಲಿದೆ. 11 ಗಂಟೆಗೆ ಸಭಾ ಕಾರ್ಯಕ್ರಮವನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು, ಶಾಸಕ ಎಸ್.ಎ.ರವೀಂದ್ರನಾಥ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಎಡಿಸಿ ಬಿ.ಎನ್.ಲೋಕೇಶ್, ಎಸ್ಪಿ ಸಿ.ಬಿ.ರಿಷ್ಯಂತ್‌, ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಮಹಿಳೆಯರಿಂದ ಕುಂಭಮೇಳ, ವಿವಿಧ ಕಲಾತಂಡಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀ ವಿಶ್ವಕರ್ಮ ರಜತ ಮೂರ್ತಿ ಮೆರವಣಿಗೆ ಜರುಗಲಿದೆ ಎಂದು ವಿವರಿಸಿದರು.

ವಿಶ್ವಕರ್ಮ ಸಮಾಜದ ರಾಜಕೀಯ, ಶೈಕ್ಷಣಿಕ ಪ್ರಗತಿಗೆ ಸರ್ಕಾರವು ಪ್ರತ್ಯೇಕವಾಗಿ ಶೇ. 5 ರ ಮೀಸಲಾತಿ ನೀಡಬೇಕು. ಎಲ್ಲಾ ಪಕ್ಷಗಳು ಸಮಾಜದವರನ್ನು ಗುರುತಿಸಿ ಸೂಕ್ತ ರಾಜಕೀಯ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದರು.

ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಬಸಾಪುರ ನಾಗೇಂದ್ರಚಾರ್, ಎನ್.ಪೂರ್ವಾಚಾಯ್, ಬಿ.ಸಿದ್ದಾಚಾರ್, ಆರ್.ವಿಜಯಕುಮಾರ್, ಜಿ.ವಿ.ಬ್ರಹ್ಮಾಚಾರ್‌, ಬಸವರಾಜಾಚಾರ್, ಬೇತೂರು ಮಂಜುನಾಥಾಚಾರ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net