ಶ್ರೀ ವೀರಭದ್ರೇಶ್ವರ ಮಹಾರಥೋತ್ಸವ ನಾಳೆ

veerapur oni
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಇಲ್ಲಿಯ ವೀರಾಪೂರ ಓಣಿಯ ಶ್ರೀ ಮಹಾಬಳೇಶ್ವರ ಮತ್ತು ರಾಯಚೋಟಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವ ಮಾರ್ಚ್ 2ರಂದು ಸಂಜೆ 5 ಗಂಟೆಗೆ ಜರುಗಲಿದೆ ಎಂದು ಶ್ರೀ ಮಹಾಬಳೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ವೀರಣ್ಣ ಶಿಂತ್ರಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 5 ಗಂಟೆಗೆ ವೀರಭದ್ರೇಶ್ವರ ಸ್ವಾಮಿ ಹಾಗೂ ಮಹಾಬಳೇಶ್ವರನಿಗೆ ಮಹಾ ರುದ್ರಾಭಿಷೇಕ, 6 ಗಂಟೆಗೆ ವೀರಪುರವತಂತರಿಂದ ಅಗ್ನಿಪುಟು, 7 ಕ್ಕೆ ಪಲ್ಲಕ್ಕಿ ಉತ್ಸವ ಆರಂಭವಾಗಿ ಪೂರ್ಣ ಕುಂಭ, ಸಕಲ ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಯಲಿದೆ. ಕರಡಿ ಮಜಲು, ಝಾಂಜ, ಕುದುರೆ ಕುಣಿತಗಳೊಂದಿಗೆ ನಗರದ ಪ್ರಮುಖ ಬಿದಿಗಳಲ್ಲಿ ಸಂಚರಿಸಿ ಮರಳಿ ದೇವಸ್ಥಾನಕ್ಕೆ ಆಗಮಿಸಿ ಮಧ್ಯಾಹ್ನ 12 ಗಂಟೆಗೆ ವೀರಪುರವಂತರೊಂದಿಗೆ ಅಗ್ನಿ ಪ್ರವೇಶ ಮಾಡಲಾಗುವುದು ಎಂದರು.

ಸಂಜೆ 5 ಗಂಟೆಗೆ ಮಹಾರಥೋತ್ಸವಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡುವರು. ಎರಡೆತ್ತಿನಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿ, ರುದ್ರಾಕ್ಷಿಮಠ ಶ್ರೀ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕಳೆದ 18 ವರ್ಷಗಳಿಂದ ಜಾತ್ರಾ ಮಹೋತ್ಸವ ನಡೆಸಲಾಗುತ್ತಿದೆ. ಆಂಧ್ರಪ್ರದೇಶದ ಪ್ರಸಿದ್ಧ ರಾಯಚೋಟಿಯಲ್ಲೂ ಮಾ. 2ರಂದೇ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತದೆ. ಅಲ್ಲಿಗೆ ತೆರಳಲು ಸಾಧ್ಯವಾಗದ ಭಕ್ತರು ಇಲ್ಲಿಯ ರಥೋತ್ಸವದಲ್ಲಿ ಪಾಲ್ಗೊಳ್ಳುವರು. ಸುಮಾರು ನಾಲ್ಕೈದು ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಉಪಾಧ್ಯಕ್ಷ ಕಲ್ಲಯ್ಯ ಚೌಕಿಮಠ, ಚಂದ್ರಶೇಖರಗೌಡ ಪಾಟೀಲ, ರವಿ ಮುತ್ತಣ್ಣ, ಮಲಯ್ಯ ವಿರಕ್ತಿಮಠ, ಜಗದೀಶ ಕಂಬಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net