

ಅರಕಲಗೂಡು: ತಾಲೂಕಿನ ಕೇರಳಾಪುರ ಗ್ರಾಮದ ಪ್ರಸಿದ್ಧ ಶ್ರೀ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ರಥೋತ್ಸವ ಬುಧವಾರ ಸಡಗರ, ಸಂಭ್ರಮದಿಂದ ನೆರವೇರಿತು.
ರಥೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಾನಗಳು, ದೇವರ ಉತ್ಸವ ಸೇವೆಗಳು ನಡೆದವು. ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಮಧ್ಯಾಹ್ನ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ಸುತ್ತಮುತ್ತಲಿನ ಹಳ್ಳಿಗಳ ಭಕ್ತರು ಪಾಲ್ಗೊಂಡಿದ್ದರು. ಜಾತ್ರೆಯಲ್ಲಿ ಸಿಹಿ ತಿನಿಸುಗಳು ಸೇರಿದಂತೆ ವಿವಿಧ ವಸ್ತುಗಳ ವ್ಯಾಪಾರ ವಹಿವಾಟು ಜೋರಾಗಿತ್ತು.