ಶ್ರೀಕೃಷ್ಣ ಜಯಂತಿ ಆಚರಣೆ ಸರಳ

ADC
Published on

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆ. 6ರಂದು ಬೆಳಗ್ಗೆ 10:30ಕ್ಕೆ ಶ್ರೀಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಯಾವುದೇ ಜಯಂತಿಯಾಗಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಾಗ ಮಾತ್ರ ಮೆರುಗು ಪಡೆಯಲಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲೆಯಲ್ಲಿ ಯಾದವ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶೈಕ್ಷಣಿಕ, ರಾಜಕೀಯ ಸೇರಿ ವಿವಿಧ ಕ್ಷೇತ್ರದಲ್ಲಿ ಮುನ್ನಲೆಗೆ ಬರುತ್ತಿದ್ದಾರೆ. ಸಮುದಾಯದ ಅಸ್ಮಿತೆ ಎನಿಸಿದ ಶ್ರೀಕೃಷ್ಣನ ಜಯಂತಿಯನ್ನು ಎಲ್ಲರೂ ಒಟ್ಟುಗೂಡಿ ಆಚರಿಸೋಣ ಎಂದರು.

ಎಸಿ ಎಂ.ಕಾರ್ತಿಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಪೊಲೀಸ್ ನಿರೀಕ್ಷಕ ಗುಡ್ಡಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಅಲೆಮಾರಿ, ಅರೆ ಅಲೆಮಾರಿ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಲಕ್ಷ್ಮಿಕಾಂತ, ಯಾದವ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಆನಂದ, ಯಾದವ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಕೃಷ್ಣಪ್ಪ, ಗೊಲ್ಲರ ಸಂಘದ ಜಿಲ್ಲಾ ನಿರ್ದೇಶಕ ಪಿ.ಬಿ.ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net