

ರಾಯಚೂರು: ಜಿಲ್ಲಾಡಳಿತದಿಂದ ಸೆ.6ರಂದು ಶ್ರೀಕೃಷ್ಣ ಜಯಂತಿಯನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಅಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರ ಅಳವಡಿಸುವ ಮೂಲಕ ಜಯಂತಿ ಆಚರಣೆ ಮಾಡಬೇಕು ಎಂದರು.
ಜಯಂತಿ ಅಂಗವಾಗಿ ಬೆಳಗ್ಗೆ 9ಕ್ಕೆ ಮೆರವಣಿಗೆ ಆರಂಭಿಸಬೇಕು. ಆದಷ್ಟು ಮೆರವಣಿಗೆ ದೂರ ಕಡಿಮೆಯಿರುವಂತೆ ನೋಡಿಕೊಳ್ಳಬೇಕು. ಮೆರವಣಿಗೆಯಲ್ಲಿ ಕಲೆ, ಸಂಸ್ಕೃತಿಗೆ ಸಂಬಂಸಿದ ಕಲಾ ತಂಡಗಳನ್ನು ಆಯ್ಕೆ ಮಾಡಬೇಕು. ಬೆಳಗ್ಗೆ 11ಕ್ಕೆ ಶಿಷ್ಟಾಚಾರದಂತೆ ವೇದಿಕೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಡಾ.ಕೆ.ಆರ್.ದುರಗೇಶ ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಮಾಜದ ಮುಖಂಡರಾದ ಕೆ.ಹನುಮಂತಪ್ಪ, ನಾಗೇಶ ಯಾದವ್, ಭೀಮಣ್ಣ ಯಾದವ್, ಗುರುಸ್ವಾಮಿ, ಹರೀಶ ನಾಡಗೌಡ, ದಾಸಪ್ಪ, ವೆಂಕಟೇಶ ಯಾದವ್, ಗೋವಿಂದಪ್ಪ ಉಪಸ್ಥಿತರಿದ್ದರು