

ಮೈಸೂರು:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿಸಿ ಟ್ರಸ್ಟ್ ವತಿಯಿಂದ ಮಂಡಿಮೊಹಲ್ಲಾ ವಲಯದಲ್ಲಿ ಆಯೋಜಿಸಿದ್ದ 12 ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಚಾಮರಾಜ ಶಾಸಕ ಕೆ.ಹರೀಶ್‌ಗೌಡ ಉದ್ಘಾಟಿಸಿದರು. ನಗರಪಾಲಿಕೆ ಮಾಜಿ ಸದಸ್ಯ ಎಂ.ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು. ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ನಗರಪಾಲಿಕೆ ಸದಸ್ಯ ರಮೇಶ್(ರಮಣಿ ), ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ, ಮಹಿಳಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಿ.ಡಿ.ಮಮತಾ, ತಾಲೂಕು ಆರೋಗ್ಯ ಅಧಿಕಾರಿ ಡಾ ರಾಜೇಶ್ವರಿ, ವಕೀಲರಾದ ಸ್ಮಿತಾ ದೇವಯ್ಯ, ಸಂಸ್ಥೆಯ ತಾಲೂಕು ಯೋಜನಾಧಿಕಾರಿ ನಂದಿನಿ, ವಲಯ ಮೇಲ್ವಿಚಾರಕಿ ಮಲ್ಲಿಕಾ ಇತರರು ಇದ್ದರು.