

ಅರಸೀಕೆರೆ (ಗ್ರಾಮಾಂತರ): ತಾಲೂಕಿನ ಕಸಬಾ ಹೋಬಳಿಯ ನಾಗತಿಹಳ್ಳಿ ಗ್ರಾಮದ ಜಯಣ್ಣ ಅವರ ಮನೆ ಹಿಂದಿನ ತೋಟದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕಳ್ಳತನಕ್ಕೆ ಗುರುವಾರ ತಡರಾತ್ರಿ ದುಷ್ಕರ್ಮಿಗಳು ಯತ್ನಿಸಿದ್ದಾರೆ. ಗಂಧದ ಮರವನ್ನು ಗರಗಸದಿಂದ ಕೊಯ್ಯುವ ಶಬ್ದ ಆಲಿಸಿ ಹೊರಗಡೆ ಬಂದ ಜಯಣ್ಣ ಕೂಗಿಕೊಂಡಾಗ ದುಷ್ಕರ್ಮಿಗಳು ಅರ್ಧಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ಇತ್ತೀಚಿಗೆ ಈ ಭಾಗದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ಪೊಲೀಸರು ರಾತ್ರಿ ಗಸ್ತು ನಿಯೋಜಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.