

ಅರಸೀಕೆರೆ: ನಗರದ ಶ್ಯಾನುಭೋಗರ ಬೀದಿ ರಸ್ತೆಗೆ ಹೊಂದಿಕೊಂಡಂತಿರುವ ಮೇಲಿನ ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರುಸಿದ್ದರಾಮೇಶ್ವರ ಸ್ವಾಮಿ ದೇಗುಲ ಕಲಶ ಪ್ರತಿಷ್ಠಾಪನೆ ಹಾಗೂ ಪ್ರವೇಶ ಮಹೋತ್ಸವ ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.
ತಮ್ಮಡಿಹಳ್ಳಿ ವಿರಕ್ತ ಮಠದ ಡಾ.ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪ್ರದಾಯದಂತೆ ವೇದಘೋಷ ಮಂತ್ರಗಳೊಂದಿಗೆ ಕಲಶ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಗ್ರಾಮ ದೇವತೆಗಳಾದ ಕರಿಯಮ್ಮ, ಮಲ್ಲಿಗೆಮ್ಮ, ಚೆಲುವರಾಯ, ಧೂತರಾಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಯಳನಡು ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ, ಮಾಡಾಳು ನಿರಂಜನ ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ, ಕೋಳಗುಂದ ಕೇದಿಗೆ ಮಠದ ಶ್ರೀ ಜಯಚಂದ್ರ ಶೇಖರ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಹಾಜರಿದ್ದರು. ತಿಪಟೂರು, ಕಡೂರು, ಬೇಲೂರು, ಹಾಸನ ಸೇರಿದಂತೆ ವಿವಿಧೆಡೆಗಳಿಂದ ಭಕ್ತರು ಆಗಮಿಸಿದ್ದರು.