

ಸುಂಟಿಕೊಪ್ಪ: ಇಲ್ಲಿನ ಶ್ರೀಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 56ನೇ ವರ್ಷದ ತೆರೆ ಮಹೋತ್ಸವ ಸಂಬಂಧ ಶನಿವಾರ, ಭಾನುವಾರ ಸೋಮವಾರ ವಿಶೇಷ ಪೂಜೆಗಳು ನಡೆಯಲಿದೆ ಎಂದು ಶ್ರೀಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 6.45 ಗಂಟೆಗೆ ಗಣಪತಿ ಹವನ 7.15 ಗಂಟೆಗೆ ಶುದ್ಧಿ ಪುಣ್ಯಾಹ, 7.30 ಗಂಟೆಗೆ ಬಾವುಟ ಏರಿಸುವುದು, ಸಂಜೆ 4 ಗಂಟೆಗೆ ಶ್ರೀಮುತ್ತಪ್ಪ ದೇವರ ಮಲೆ ಇಳಿಸುವಿಕೆ, ರಾತ್ರಿ 6 ಗಂಟೆಗೆ ಚಂಡೆಮೇಳ, 7 ಗಂಟೆಗೆ ಶ್ರೀಮುತ್ತಪ್ಪ ವೆಳ್ಳಾಟಂ ನಡೆಯಲಿದೆ.
23 ರಂದು ಬೆಳಗ್ಗೆ 7 ಗಂಟೆಗೆ ವಾದ್ಯಮೇಳ, 11 ಗಂಟೆಗೆ ಶ್ರೀಶಾಸ್ತಪ್ಪನ ವೆಳ್ಳಾಟಂ, ಮಧ್ಯಾಹ್ನ 1 ಗಂಟೆಗೆ ಶ್ರೀಗುಳಿಗ ವೆಳ್ಳಾಟಂ, ಸಂಜೆ 4 ಗಂಟೆಗೆ ಅಡಿಯರ ಮೆರವಣಿಗೆ, ರಾತ್ರಿ 7 ಗಂಟೆಗೆ ಶ್ರೀಮುತ್ತಪ್ಪ ವೆಳ್ಳಾಟಂ, 8 ಗಂಟೆಗೆ ಶ್ರೀಚಾಮುಂಡೇಶ್ವರಿ ಮತ್ತು ಶ್ರೀರಕ್ತ ಚಾಮುಂಡಿ ವೆಳ್ಳಾಟಂ, 8.30 ಗಂಟೆಗೆ ಶ್ರೀವಸೂರಿಮಾಲೆ ಸ್ನಾನಕ್ಕೆ ಹೊರಡುವುದು, 9.ಗಂಟೆಗೆ ವಿಷ್ಣುಮೂರ್ತಿ ವೆಳ್ಳಾಟಂ,11 ಗಂಟೆಗೆ ಕಳಿಗ ಪಾಟ್ ಅಂದಿವೇಳ ಕಳಸಂ ಸ್ವೀಕರಿಸುವುದು, ವೆಳ್ಳಕಟ್ಟ್, 1.15ಕ್ಕೆ ಗುಳಿಗನ ಕೋಲ,2 ಗಂಟೆಗೆ ಶಾಸ್ತಪ್ಪನ ಕೋಲ, ಬೆಳಗಿನ ಜಾವ 4 ಗಂಟೆಗೆ ಶ್ರೀಮುತ್ತಪ್ಪ ಮತ್ತು ಶ್ರೀತಿರುವಪ್ಪನ ಕೋಲ, 5 ಗಂಟೆಗೆ ಗಂಭೀರ ಪಟಾಕಿ.
24ರಂದು ಬೆಳಗ್ಗೆ 7 ಗಂಟೆಗೆ ಶ್ರೀರಕ್ತ ಚಾಮುಂಡಿಕೋಲ, 8 ಗಂಟೆಗೆ ಶ್ರೀಮುತ್ತಪ್ಪ ಮತ್ತು ಶ್ರೀತಿರುವಪ್ಪ ದೇವರ ಪಳ್ಳಿವೇಟ, 9 ಗಂಟೆಗೆ ಶ್ರೀವಿಷ್ಣುಮೂರ್ತಿಕೋಲ, 10 ಗಂಟೆಗೆ ಶ್ರೀಚಾಮುಂಡೇಶ್ವರಿ ಕೋಲ, 11 ಗಂಟೆಗೆ ಶ್ರೀವಸೂರಿ ಮಾಲೆ ಕೋಲ, ಮಧ್ಯಾಹ್ನ 12 ಗಂಟೆಗೆ ಗುರುಶ್ರೀ ದರ್ಪಣ, ಅಪರಾಹ್ನ 2 ಗಂಟೆಗೆ ಬಾವುಟ ಇಳಿಸಲಾಗುವುದೆಂದು ಶ್ರೀಚಾಮುಂಡೇಶ್ವರಿ ಹಾಗೂ ಮುತ್ತಪ್ಪ ದೇವಾಲಯ ಸಮಿತಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.