ಚಾಮರಾಜನಗರ: ಶ್ರೀಭಗೀರಥ ಜಯಂತಿ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ಏ.19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.
ಈ ಸಭೆಗೆ ಜಿಲ್ಲೆಯ ಭಗೀರಥ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರು ಹಾಜರಾಗಿ ಸಲಹೆ, ಸೂಚನೆಗಳನ್ನು ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.