

ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. ಗಣಪತಿ, ಶ್ರೀ ದುರ್ಗಾ ಪರಮೇಶ್ವರಿ, ನವಗ್ರಹ ದೇವಾಲಯಗಳಲ್ಲಿ ವಿವಿಧ ಪೂಜೆಗಳು ನೆರವೇರಿದವು.
ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ದೇವಾಲಯದ ಅರ್ಚಕ ಮಹಾಬಲೇಶ್ವರ ಭಟ್ ಅವರ ಸಮ್ಮುಖದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಕೊಳ್ಳಿಮಾಡ ಸೋಮಯ್ಯ, ಕಾರ್ಯದರ್ಶಿ ಕಾಟಿಮಾಡ ಗಿರಿ ಅಯ್ಯಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.