ಪಾಂಡವಪುರ: ತಾಲೂಕಿನ ಬೇಬಿ ಬೆಟ್ಟದ ಐತಿಹಾಸಿಕ ಭಾರಿ ದನಗಳ ಜಾತ್ರೆ ಹಿನ್ನೆಲೆಯಲ್ಲಿ ಕ್ಷೇತ್ರ ದೇವತೆಗಳಾದ ಶ್ರೀಮಹದೇಶ್ವರ ಹಾಗೂ ಶ್ರೀಸಿದ್ದೇಶ್ವರ ರಥೋತ್ಸವ ಮಾ.4ರಂದು ಜರುಗಲಿದೆ.
ರಥೋತ್ಸವಕ್ಕೆ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀಸಿದ್ಧಲಿಂಗ ಮಹಾಸ್ವಾಮೀಜಿ ಚಾಲನೆ ನೀಡಲಿದ್ದು, ಬೇಬಿ ಬೆಟ್ಟದ ರಾಮಯೋಗೀಶ್ವರ ಮಠದ ಶ್ರೀಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಲಿದ್ದು, ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾ.6ರಂದು ಕ್ಷೇತ್ರ ದೇವತೆಗಳ ತೆಪ್ಪೋತ್ಸವ ಹಾಗೂ ಜಾತ್ರೆಯಲ್ಲಿ ಭಾಗವಹಿಸಿದ್ದ ಉತ್ತಮ ರಾಸುಗಳ ಆಯ್ಕೆ ನಡೆಯಲಿದೆ. ಮಾ.7ರಂದು ಆಯ್ಕೆಯಾದ ರಾಸುಗಳ ಪ್ರತಿ ವಿಭಾಗಕ್ಕೂ ಚಿನ್ನದ ಬಹುಮಾನ ವಿತರಿಸಲಾಗುವುದು ಎಂದು ಜಾತ್ರಾ ಮಹೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.