ಶ್ರೀರಂಗಪಟ್ಟಣದಲ್ಲಿ ದಸರಾ ವೈಭವ...!

IMG-20201023-WA0050
Published on

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಶುಕ್ರವಾರ ಪಾರಂಪರಿಕ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು.
ಬನ್ನಿಮಂಟಪದ ಎದುರು ಚಾಮುಂಡೇಶ್ವರಿ ಮೂರ್ತಿ ಹೊತ್ತ ಮೆರವಣಿಗೆ ಕರೊನಾ ಸೇನಾನಿಗಳು ಚಾಲನೆ ನೀಡಿದರು. ಇಲ್ಲಿಂದ ಹೊರಟ ಮೆರವಣಿಗೆ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಶ್ರೀರಂಗನಾಥಸ್ವಾಮಿ ದೇವಾಲಯದ ಎದುರು ಮುಕ್ತಾಯವಾಗಲಿದೆ. ಕರೊನಾ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆ ಜಾನಪದ ಕಲಾ ತಂಡಗಳಿಗಷ್ಟೇ ಅವಕಾಶ ನೀಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಶೈಲಜಾ, ಶ್ರೀರಂಗಪಟ್ಟಣ ತಹಸೀಲ್ದಾರ್ ರೂಪಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net