ಶ್ರೀರಾಮ ನಮ್ಮ ಸ್ವಾಭಿಮಾನದ ಪ್ರತೀಕ

14ydg01
Published on


ಯಾದಗಿರಿ: ದೇಶದಲ್ಲಿನ ಪ್ರತಿ ಹಿಂದುಗಳ ಪ್ರತೀಕವಾಗಿರುವ ಪ್ರಭು ಶ್ರೀರಾಮಚಂದ್ರನ ಮಂದಿರ ಆಯೋಧ್ಯೆಯಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆಯಾಗುತ್ತಿರುವುದು ನಮ್ಮೆಲ್ಲರ ಸ್ವಾಭಿಮಾನದ ಧ್ಯೋತಕವಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ ತಿಳಿಸಿದರು.

ಭಾನುವಾರ ನಗರದ ಸಾಯಿನಗರದ ಆತ್ಮಲಿಂಗ ದೇವಸ್ಥಾನದಲ್ಲಿ ಸ್ವಚ್ಛತೀರ್ಥ ಅಭಿಯಾನಕ್ಕೆ ಕಸ ಗೂಡಿಸಿ ಚಾಲನೆ ನೀಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇವಸ್ಥಾನದ ಸ್ವಚ್ಛತಾ ಅಭಿಯಾನ ಕೈಗೊಳ್ಳಿ ಎಂದು ದೇಶದ ನಿವಾಸಿಗಳಿಗೆ ಕರೆ ನೀಡಿದ್ದಾರೆ. ಹೀಗಾಗಿ ಯುವಜನತೆ ಜ.22ರವರೆಗೆ ಈ ಅಭಿಯಾನಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು.

ರಾಮಮಂದಿರ ನಿರ್ಮಾಣದ ಕನಸು ಇಂದು ನಿನ್ನೆಯದ್ದಲ್ಲ. ಇದಕ್ಕಾಗಿ ಲಕ್ಷಾಂತರ ಕರ ಸೇವಕರು ಪ್ರಾಣ ಬಲಿದಾನ ಮಾಡಿದ್ದಾರೆ. ಹಲವು ದಶಕಗಳ ಹೋರಾಟದ ಫಲವಾಗಿ ಇಂದು ಆಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣಗೊಂಡು ಶ್ರೀರಾಮಲಲ್ಲಾ ನಮಗೆ ಆಶಿವರ್ಾದ ಮಾಡುತ್ತಿದ್ದಾನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net