

ಸುಂಟಿಕೊಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಕಾನ್‌ಬೈಲ್ ಗ್ರಾಮದ ಶ್ರೀರಾಮ ಮಂದಿರ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಭಾನುವಾರ ಸ್ವಚ್ಛಗೊಳಿಸಿದರು.
ಪ್ರತಿ ವರ್ಷ ಯೋಜನೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಅದರಂತೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿ ಶ್ರೀರಾಮ ಮಂದಿರದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯಾ ಚಾಲನೆ ನೀಡಿದರು.
ಯೋಜನೆಯ ನಾಕೂರು ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರು ಆವರಣದಲ್ಲಿ ಬೆಳೆದಿದ ಗಿಡಗಂಟಿ, ಪ್ಲಾಸ್ಟಿಕ್ ಇತರ ತ್ಯಾಜ್ಯವನ್ನು ತೆರವುಗೊಳಿಸಿದರು. ಅಲ್ಲದೆ ದೇವಾಲಯದ ಒಳಾಂಗಣವನ್ನು ಶುಭ್ರಗೊಳಿಸಿದರು.
ಒಕ್ಕೂಟದ ಉಪಾಧ್ಯಕ್ಷೆ ರೇಖಾ, ಸೇವಾ ಪ್ರತಿನಿಧಿ ಯಶೋದಾ, ದೇವಸ್ಥಾನ ಸಮಿತಿ ಪದಾಧಿಕಾರಿಗಳು ಇದ್ದರು.