

ಸುಂಟಿಕೊಪ್ಪ: ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಆಂದೋಲನ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಒಕ್ಕೂಟ ಹಾಗೂ ಸ್ವಸಹಾಯ ಸಂಘದ ಸದಸ್ಯರು ಕಾನ್‌ಬೈಲ್‌ನ ಶ್ರೀರಾಮ ಮಂದಿರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಶ್ರೀರಾಮ ಮಂದಿರ ಅಧ್ಯಕ್ಷ ಬಿ.ಜಿ.ರಮೇಶ್, ಯೋಜನೆಯ ವಲಯ ಮೇಲ್ವಿಚಾರಕಿ ಭವ್ಯಾ, ಕಾನ್‌ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಉಪಾಧ್ಯಕ್ಷೆ ರೇಖಾ ಸ್ವಚ್ಛತಾ ಕಾರ್ಯದ ನೇತೃತ್ವ ವಹಿಸಿದ್ದರು.
ನಾಕೂರು ಶಿರಂಗಾಲ, ಕಾನ್‌ಬೈಲ್, ಮಂಜಿಕೆರೆ, ಮಳ್ಳೂರು, ಹೆರೂರು ವಿಭಾಗದ ಸ್ವಸಹಾಯ ಸಂಘದ ಸದಸ್ಯರು ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಕಡಿದು, ಆವರಣದಲ್ಲಿದ್ದ ಕಸಕಡ್ಡಿಯನ್ನು ತೆಗೆದು ಸ್ವಚ್ಛಗೊಳಿಸಿದರು. ಬಳಿಕ ದೇವಸ್ಥಾನದ ಒಳಭಾಗವನ್ನು ಸ್ವಚ್ಛಗೊಳಿಸಿದರು.
ಸೇವಾ ಪ್ರತಿನಿಧಿ ಯಶೋದಾ ಬಸವರಾಜು, ಒಕ್ಕೂಟದ ಪದಾಧಿಕಾರಿಗಳು ಇದ್ದರು.