

ಮೈಸೂರು: ಶ್ರೀರಾಮಕೃಷ್ಣ ಪರಮಹಂಸರ 188ನೇ ಜನ್ಮ ದಿನೋತ್ಸವದ ಅಂಗವಾಗಿ ಶ್ರೀ ರಾಮಕೃಷ್ಣ ಆಶ್ರಮ, ಶ್ರೀ ರಾಮಕೃಷ್ಣ ಜಾತ್ರೋತ್ಸವ ಸಮಿತಿ ಹಾಗೂ ಶ್ರೀ ರಾಮಕೃಷ್ಣ ಸೇವಾಸಂಘಗಳ ಸಂಯುಕ್ತಾಶ್ರಯದಲ್ಲಿ ಆಧ್ಯಾತ್ಮಿಕ ಚಿಂತನ ಮಂಥನ ಕಾರ್ಯಕ್ರಮವನ್ನು ಫೆ.21ರಿಂದ 26ರ ವರೆವಿಗೆ ಸಂಜೆ 6ರಿಂದ 7ರವರೆಗೆ ರಾಮಕೃಷ್ಣನಗರದ ರಾಮಕೃಷ್ಣ ಪರಮಹಂಸ ವೃತ್ತದಲ್ಲಿ ಏರ್ಪಡಿಲಾಗಿದೆ.
21ರಂದು ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಅವರಿಂದ ವಿವೇಕಾನಂದರ ಸಾಹಿತ್ಯದಲ್ಲಿ ಅಧ್ಯಾತ್ಮ ಕುರಿತು, .22ರಂದು ಆಧ್ಯಾತ್ಮಿಕ ಚಿಂತಕ ಶಂಕರ ದೇವನೂರು ಅವರಿಂದ ವಚನ ಸಾಹಿತ್ಯದಲ್ಲಿ ಅಧ್ಯಾತ್ಮ, 23ರಂದು ಸಾಹಿತಿ ಪ್ರೊ.ಸಿ.ನಾಗಣ್ಣ ಅವರಿಂದ ಕುವೆಂಪು ಸಾಹಿತ್ಯದಲ್ಲಿ ದರ್ಶನ, 24ರಂದು ವೈದ್ಯ ಸಾಹಿತಿ ಡಾ.ಎಸ್.ಪಿ.ಯೋಗಣ್ಣ ಅವರಿಂದ ಆಧ್ಯಾತ್ಮಿಕ ಆರೋಗ್ಯ, 25ರಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರಿಂದ ಜೀವನಶೈಲಿಯ ಕಾಯಿಲೆಗಳು ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿವೆ. ಇದರೊಂದಿಗೆ ವಿವಿಧ ಭಜನಾಮಂಡಳಿಗಳಿಂದ ಭಜನೆ, ಯೋಗ ಪ್ರಾತ್ಯಕ್ಷಿಕೆ, ಹಾಡುಗಾರಿಕೆ ಮುಂತಾದ ಕಾರ್ಯಕ್ರಮ ನಡೆಯಲಿವೆ.
26ರಂದು ಸಂಜೆ ರಥೋತ್ಸವ ನಡೆಯಲಿದೆ. ಇದರೊಂದಿಗೆ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆ ವತಿಯಿಂದ 21ರಿಂದ 26ರವರೆವಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ತಜ್ಞ ವೈದ್ಯರಿಂದ ಬೃಹತ್ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಆಯ್ದ 10 ಜನರಿಗೆ ಉಚಿತ ಆಂಜಿಯೋಗ್ರಾಂ ಹಾಗೂ ಆಂಜಿಯೋಪ್ಲಾಸ್ಟಿ ಮಾಡಲಾಗುತ್ತಿದ್ದು, ಸಾರ್ವಜನಿಕರು ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಮಕೃಷ್ಣ ಜಾತ್ರೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಡಿ.ಮಾದೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.