

ಚಾಮರಾಜನಗರ: ನಮ್ಮದೇಶಕ್ಕೆ ಸ್ವಾತಂತ್ರ್ಯ ಬರಲು ಹಲವಾರು ಮಹನಿಯರ ಹೋರಾಟದ ಶ್ರಮವಿದೆ ಎಂದು ಶ್ರೀರಾಮಚಂದ್ರ ವಿದ್ಯಾಸಂಸ್ಥೆಯ ಅಧ್ಯಕ್ಷ ಎಂ.ಎಸ್.ಮಾದಯ್ಯ ಹೇಳಿದರು.
ನಗರದ ನ್ಯಾಯಾಲಯ ರಸ್ತೆಯಲ್ಲಿ ಇರುವ ಶ್ರೀರಾಮಚಂದ್ರ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಇತಿಹಾಸ ತಿಳಿಯುವ ಶಿಕ್ಷಣ ಅವಶ್ಯಕವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ನಮ್ಮ ದೇಶವನ್ನು ಗೌರವಿಸುವ ಉತ್ತಮ ವ್ಯಕ್ತಿಯಾಗಬೇಕು. ಶಿಕ್ಷಣವನ್ನು ವಿದ್ಯಾರ್ಥಿಗಳು ಗೌರವಿಸಿದರೆ ಶಿಕ್ಷಣ ನಿಮಗೆ ದಾರಿದೀಪವಾಗಲಿದೆ ಎಂದರು
ಸಂಸ್ಥೆಯ ಕಾರ್ಯದರ್ಶಿ ಎಂ.ರುದ್ರಮೂರ್ತಿ ಮಾತನಾಡಿದರು. ನಿರ್ದೇಶಕರಾದ ಎಸ್.ಮಹೇಶ್, ಪ್ರೌಢಶಾಲೆ ಮುಖ್ಯಶಿಕ್ಷಕಿ ರತ್ನಮ್ಮ, ದೈಹಿಕ ಶಿಕ್ಷಣ ಶಿಕ್ಷಕ ರಂಗಸ್ವಾಮಿ, ಕುಮಾರ್, ಪರಶಿವಮೂರ್ತಿ, ಯಶ್ ಪಾಲ್, ಮಂಜುಳಾ ಉಪಸ್ಥಿತರಿದ್ದರು.