

ಹನೂರು: ಪಟ್ಟಣದ ರಾಮಮಂದಿರಲ್ಲಿ ಭಾನುವಾರ ಶ್ರೀರಾಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಶ್ರೀರಾಮನವಮಿ ಆಚರಿಸಲಾಯಿತು.
ದೇಗುಲವನ್ನು ತಳಿರು-ತೋರಣ, ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆ 9 ಗಂಟೆಗೆ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಪುಣ್ಯಾಹ್ನ, ನವಗ್ರಹ ಹೋಮ, ರಾಮ ತಾರಕ ಹೋಮ ಹಾಗೂ ಪೂರ್ಣಾಹುತಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಜನರು ದೇವರ ದರ್ಶನ ಪಡೆದು ರಾಮನಾಮ ಪಠಿಸಿದರು. ಭಕ್ತರಿಗೆ ಪಾನಕ, ಕೋಸಂಬರಿ ವಿತರಿಸಲಾಯಿತು.