

ಚಿಂತಾಮಣಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗಂಡ್ರಗಾನಹಳ್ಳಿ ಶ್ರೀರಾಮರೆಡ್ಡಿ ಅಧ್ಯಕ್ಷರಾಗಿ, ತಮ್ಮೆಪಲ್ಲಿಯ ಮಂಜುನಾಥರೆಡ್ಡಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಎಪಿಎಂಸಿ ಸಭಾಂಗಣದಲ್ಲಿ ಬುಧವಾರ ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆಗೆ ಬೆಳಗ್ಗೆ 11 ರಿಂದ 12ರವರೆಗೆ ಸಮಯ ನಿಗದಿಪಡಿಸಿದ್ದರು.ಅಧ್ಯಕ್ಷ ಸ್ಥಾನಕ್ಕೆ ಶ್ರೀರಾಮರೆಡ್ಡಿ, ಉಪಾಧ್ಯಕ್ಷ ಸ್ಥಾನಕ್ಕೆ ಮಂಜುನಾಥರೆಡ್ಡಿ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ತಹಸೀಲ್ದಾರ್ ಡಿ. ಹನುಮಂತರಾಯಪ್ಪ ೋಷಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಮಾಜಿ ಶಾಸಕರ ಬೆಂಬಲಿಗರು ಎಪಿಎಂಸಿ ಪ್ರಾಂಗಣ, ಪ್ರಮುಖ ವೃತ್ತ ಮಾಜಿ ಶಾಸಕರ ನಿವಾಸ ಮಾಳಪಲ್ಲಿ ಬಳಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ನಿರ್ದೇಶಕರಿಗೆ ಕೃತಜ್ಞತೆ ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷ ಸ್ಥಾನಕ್ಕೆ ಐದು ಮಂದಿ ಅಕಾಂಕ್ಷಿಗಳಾಗಿದ್ದು ಎಲ್ಲರೂ ನನ್ನ ಮತ್ತು ತಾಲೂಕಿನ ಮುಖಂಡರ ಮಾತಿಗೆ ಗೌರವ ನೀಡಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ನಿರ್ದೇಶಕರಿಗೆ ಕೃತಜ್ಞತೆಗಳು ಎಂದು ಮಾಜಿ ಶಾಸಕ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.