ಶ್ರೀರಾಮುಲು ಸೆಳೆಯುವ ಪ್ರಯತ್ನ ಮಾಡಿಲ್ಲ

Published on

ಚಾಮರಾಜನಗರ: ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂಬುದು ಊಹಾಪೋಹ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ವಾಲ್ಮೀಕಿ ಸಮುದಾಯಕ್ಕೆ ಸೇರಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಾಗಾಲೋಟಕ್ಕೆ ಬ್ರೇಕ್ ಹಾಕಲು ಶ್ರೀರಾಮುಲು ಸೆಳೆಯುವ ಯತ್ನ ನಡೆದಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಇದೆಲ್ಲ ಊಹಾಪೋಹಾ ಅಷ್ಟೆ. ಹಿಂದೆ ಕರೆದಿದ್ದು ನಿಜ, ಈಗ ಕರೆದಿಲ್ಲವಲ್ಲ. ಅವರು ಬಂದಾಗ ನೋಡೋಣ ಎಂದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ದಿನಾಂಕ ಬದಲಾವಣೆಯಾಗಿದೆ. ಫೆ.15ರ ಬದಲು ೆ.17ರಂದು ಸಚಿವ ಸಂಪುಟ ಸಭೆ, ೆ.18ರಂದು ಚಾಮರಾಜನಗರದಲ್ಲಿ ಗ್ಯಾರಂಟಿ ಯೋಜನೆಗಳ ಲಾನುಭವಿಗಳ ಬೃಹತ್ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮೈಕ್ರೋ ಫೈನಾನ್ಸ್ ಯಾರ ಮೇಲಾದರೂ ದೌರ್ಜನ್ಯ ಎಸಗಿದರೆ, ಬಲವಂತವಾಗಿ ಹಣ ವಸೂಲಿಗೆ ಮುಂದಾಗಿದ್ದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಇದಕ್ಕೆ ಹೊಸ ಕಾನೂನು ತರಲು ವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net