ಶ್ರೀಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಅದ್ಧೂರಿ

07 krp - 01
ಅಕ್ಕಿಹೆಬ್ಬಾಳಿನ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಿತು.
Published on

ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸುಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವರ ಮಹಾ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ಹೇಮಾವತಿ ನದಿ ತೀರಿದ ಹಳೆಯ ಅಕ್ಕಿಹೆಬ್ಬಾಳಿನಲ್ಲಿರುವ ದೇವಾಲಯದ ಆವರಣದಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಉತ್ಸವ ಮೂರ್ತಿಯನ್ನು ಭಕ್ತಾದಿಗಳೊಂದಿಗೆ ಹೆಗಲ ಮೇಲೆ ಹೊತ್ತು ರಥದ ಬಳಿಗೆ ತಂದ ಸಚಿವರು, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಪ್ರತಿವಷರ್ವೂ ಅಕ್ಕಿಹೆಬ್ಬಾಳು ಗ್ರಾಮದ ಲ್ಲ ಸಮುದಾಯದವರು ಸೇರಿ ರಥೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಂಡು ಬರುತ್ತಿರುವುದು ಸಂತೋಷದ ಸಂಗತಿ. ಇನ್ನೂ ಹೆಚ್ಚಿನ ರೀತಿ ಮುಂದುವರಿಸಿಕೊಂಡು ಮುಂದಿನ ಪೀಳಿಗೆಗೆ ತಿಳಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಜಾತ್ರಾ ಮಹೋತ್ಸವಕ್ಕೆ ಅಕ್ಕಿಹೆಬ್ಬಾಳು ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಏರ್ಪಡಿಸಲಾಗಿತ್ತು. ಅನ್ನದಾಸೋಹಕ್ಕೆ ಸಚಿವರಾದ ನಾರಾಯಣಗೌಡ ಅವರು ಭಕ್ತರಿಗೆ ದೇವರ ಪ್ರಸಾದ ಬಡಿಸುವ ಮೂಲಕ ಚಾಲನೆ ನೀಡಿದರು.

ತಹಸೀಲ್ದಾರ್ ನಿಸರ್ಗಪ್ರಿಯ, ಅಕ್ಕಿಹೆಬ್ಬಾಳು ಗ್ರಾಪಂ ಅಧ್ಯಕ್ಷೆ ನಾಗೇಶ್ವರಿ, ಉಪಾಧ್ಯಕ್ಷ ಸತೀಶ್ ಜೆಡಿಎಸ್ ಮುಖಂಡ ಅಕ್ಕಿಹೆಬ್ಬಾಳು ರಘು, ಜಿಪಂ ಮಾಜಿ ಸದಸ್ಯ ಅಂಬರೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಪನಹಳ್ಳಿ ನಾಗೇಂದ್ರಕುಮಾರ್, ಪಿಡಿಒ ರವಿಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net