

ಶ್ರೀರಂಗಪಟ್ಟಣ: 2025-26ನೇ ಸಾಲಿನ ರಾಜ್ಯಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ಆಸಕ್ತ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಪ್ರಿಯದರ್ಶಿನಿ ತಿಳಿಸಿದ್ದಾರೆ.
ತಾಲೂಕಿನ ಕೃಷಿ ಕ್ಷೇತ್ರದಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯುವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು ಕುರಿ ಮೊಲ ಇತ್ಯಾದಿ ಸಾಕಣೆ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿರುವ ರೈತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ 10 ರೈತರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಲಾ 25 ಸಾವಿರ ರೂ., ತಾಲೂಕಿನ 5 ರೈತರಿಗೆ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಲಾ 10 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಭತ್ತ ಬೆಳೆಯುವ ರೈತರು ಭತ್ತದ ಬೆಳೆಯಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ರೈತರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆ.30ರ ಸಂಜೆ 5 ರೊಳಗಾಗಿ ತಲುಪಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.