ಶ್ರೇಷ್ಠ ರಾಜಕಾರಣಿ ವಿ.ಶ್ರೀನಿವಾಸಪ್ರಸಾದ್

Oplus_131072
ಪಟ್ಟಣದ ಡಾ.ಬಿಆರ್ ಅಂಬೇಡ್ಕರ್ ವೃತ್ತದ ಬಳಿ ವಿ.ಶ್ರೀನಿವಾಸ ಪ್ರಸಾದ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಸಮಾರಂಭ ಆಯೋಜಿಸಲಾಗಿತ್ತು. ಕುಂಬರಹಳ್ಳಿ ಸುಬ್ಬಣ್ಣ, ಎಸ್. ಮಹದೇವಯ್ಯ, ಶ್ರೀಕಂಠಸ್ವಾಮಿ, ಪದ್ಮನಾಭರಾವ್, ಸಿಂಧುವಳ್ಳಿ ಕೆಂಪಣ್ಣ ಇದ್ದರು.
Published on

ನಂಜನಗೂಡು: ವಿ.ಶ್ರೀನಿವಾಸಪ್ರಸಾದ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕಿ ಇಲ್ಲದೆ ಆಡಳಿತ ನಡೆಸಿದ ಶ್ರೇಷ್ಠ ರಾಜಕಾರಣಿ ಎಂದು ಬಿಜೆಪಿ ಮುಖಂಡ ಕುಂಬರಹಳ್ಳಿ ಸುಬ್ಬಣ್ಣ ಬಣ್ಣಿಸಿದರು.

ಪಟ್ಟಣದ ಡಾ.ಬಿಆರ್ ಅಂಬೇಡ್ಕರ್ ವೃತ್ತದ ಬಳಿ ಮಾಜಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಮೊದಲನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ಶ್ರೀನಿವಾಸಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಶ್ರೀನಿವಾಸಪ್ರಸಾದ್ ಅವರು ವ್ಯಕ್ತಿಯಲ್ಲ ಶಕ್ತಿಯಾಗಿದ್ದರು. ಸಮಾಜದ ಪರಿವರ್ತನೆಗಾಗಿ ಶೋಷಿತರು, ಬಡವರು, ಧಮನಿತರ ಪರವಾಗಿ ಧ್ವನಿಯಾಗಿ ನಿಂತಿದ್ದರು. ಸ್ವಾಭಿಮಾನಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿದ್ದರು. ತಮ್ಮ ಜೀವಿತಾವಧಿಯಲ್ಲಿ ನೇರ ನಿಷ್ಠುರವಾದಿಯಾಗಿ ನಡೆದುಕೊಂಡು 50 ವರ್ಷಗಳ ಸುದೀರ್ಘ ರಾಜಕೀಯ ಜೀವನವನ್ನು ನಡೆಸಿದರು ಎಂದು ಸ್ಮರಿಸಿದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ವಿಚಾರಧಾರೆಗಳು, ತತ್ವ ಸಿದ್ಧಾಂತಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಶ್ರೀನಿವಾಸಪ್ರಸಾದ್ ಬದುಕು ಸವೆಸಿದ್ದಾರೆ ಎಂದು ಬಣ್ಣಿಸಿದರು.

ಕೇವಲ ಒಂದು ಪಕ್ಷಕ್ಕೆ ಸೀಮಿತವಾಗದೆ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತಿದ್ದರು. ಪ್ರತಿಯೊಬ್ಬರೂ ಶಿಕ್ಷಿತರಾದರೆ ಮಾತ್ರ ಸಮಾಜ ಸುಧಾರಣೆ ಸಾಧ್ಯ. ಪ್ರತಿಯೊಬ್ಬರೂ ಬುದ್ಧ, ಬಸವ, ಅಂಬೇಡ್ಕರ್ ಮಾರ್ಗದಲ್ಲಿ ನಡೆಯಬೇಕು ಎಂಬ ಹಂಬಲ ಹೊಂದಿದ್ದರು ಎಂದರು.

ಶ್ರೀನಿವಾಸಪ್ರಸಾದ್ ವಿದ್ಯಾರ್ಥಿ ಜೀವನದಿಂದಲೇ ಹೋರಾಟ, ಚಳವಳಿಗಳ ಮೂಲಕ ಗುರುತಿಸಿಕೊಂಡು ರಾಜಕೀಯಕ್ಕೆ ಬಂದವರು. ಯಾವುದೇ ಪಕ್ಷದಲ್ಲಿದ್ದರೂ ಸ್ವಾಭಿಮಾನ, ಸಿದ್ಧಾಂತವನ್ನು ಕೈ ಬಿಡಲಿಲ್ಲ. ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು ಎಂದು ಸ್ಮರಿಸಿದರು.

ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಪ್ರಥಮ ದರ್ಜೆ ಗುತ್ತಿಗೆದಾರ ಪದ್ಮನಾಭರಾವ್, ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸಿಂಧುವಳ್ಳಿ ಕೆಂಪಣ್ಣ, ಮಾಜಿ ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ತಾ.ಪಂ ಅಧ್ಯಕ್ಷ ಮಹದೇವಪ್ಪ, ಮಾಜಿ ತಾಪಂ ಉಪಾಧ್ಯಕ್ಷ ಸಿ.ಎಂ.ಮಹದೇವಯ್ಯ, ಮಾಜಿ ತಾ.ಪಂ ಸದಸ್ಯ ಬಿಎಸ್ ರಾಮು, ದೇವಿರಮ್ಮನಹಳ್ಳಿ ಬಸವರಾಜು, ಅರುಣ್, ಹೆಮ್ಮರಗಾಲ ಸೋಮಣ್ಣ, ಸುರೇಶ್ ದೇವರಸನಹಳ್ಳಿ, ಬಸವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net