ಷಟಲ್ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯ ವಿದ್ಯಾರ್ಥಿಗಳಾದ ನೇಹ ಅನೀಶ್ ಹಾಗೂ ಡೆಲೀಶಾ ಮುತ್ತಮ್ಮ ಜೋಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ವಿಜೇತರಾಗಿ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಹಾಗೂ ಸುನಿಲ್ ಅವರಿಂದ ಬಹುಮಾನ ಸ್ವೀಕರಿಸಿದರು.
06Kush01
Published on

ಕುಶಾಲನಗರ: ಇಲ್ಲಿಗೆ ಸಮೀಪದ ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆಯ ವಿದ್ಯಾರ್ಥಿಗಳಾದ ನೇಹ ಅನೀಶ್ ಹಾಗೂ ಡೆಲೀಶಾ ಮುತ್ತಮ್ಮ ಜೋಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕುಶಾಲನಗರದ ಜಂಪ್ ಸ್ಮಾಷ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನೇಹ ಅನೀಶ್ ಕೊಡಗರಹಳ್ಳಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ಡೆಲೀಶಾ ಸಿಂಗಲ್ಸ್‌ನಲ್ಲೂ ಉತ್ತಮ ಸಾಧನೆ ತೋರಿದ್ದು 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ವಿಜೇತರಿಗೆ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಹಾಗೂ ಸುನಿಲ್ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕಿ ಮೇರಿ ಫ್ಯಾಟಿಮಾ ಅಭಿನಂದನೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net