ಸಂಕನೂರ ಗೆಲುವು ನಿಶ್ಚಿತ

24-gdg-4
Published on

ಗದಗ: ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಂಖ್ಯೆ ಹೆಚ್ಚಿದಲ್ಲಿ ಆಡಳಿತ ಪಕ್ಷದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಹಾಗೂ ಬಲ ಬರಲಿದೆ. ಪಶ್ಚಿಮ ಪದವೀಧರ ಮತಕ್ಷೇತ್ರದ ಪ್ರತಿನಿಧಿಯಾಗಿ ಕಳೆದ ಅವಧಿಯಲ್ಲಿ ಎಸ್.ವಿ. ಸಂಕನೂರ ಅವರು ಸಾಕಷ್ಟು ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರು, ನೌಕರರು ಹಾಗೂ ಪದವೀಧರರು ತಮ್ಮ ಪ್ರಥಮ ಪ್ರಾಶಸ್ಱದ ಮತವನ್ನು ಸಂಕನೂರರಿಗೆ ನೀಡುವ ಮೂಲಕ ಮತ್ತೊಮ್ಮೆ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಕೆಎಲ್​ಇ ಸಂಸ್ಥೆಯ ಚೇರ್ಮನ್ ಡಾ. ಪ್ರಭಾಕರ ಕೋರೆ ಮನವಿ ಮಾಡಿದರು.

ನಗರದ ಕೆಎಲ್​ಇ ಸಂಸ್ಥೆಯ ಜೆಟಿ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಪಶ್ಚಿಮ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ನಡೆಯುತ್ತಿರುವ ಆರು ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸುವುದು ನಿಶ್ಚಿತ. ಕಾರ್ಯಕರ್ತರು, ಮುಖಂಡರು ಹೆಚ್ಚು ಕ್ರಿಯಾಶೀಲರಾಗಿ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡಿಸುವಲ್ಲಿ ಶ್ರಮಿಸಬೇಕು. ಹೆಚ್ಚಿನ ಸಂಖ್ಯೆಯ ಅಂತರದಿಂದ ಸಂಕನೂರ ಅವರನ್ನು ಆರಿಸಿ ತರಬೇಕು ಎಂದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಕೆಎಲ್​ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಲಿಂಗರಾಜ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮೋಹನ ಮಾಳಶೆಟ್ಟಿ ಉಪಸ್ಥಿತರಿದ್ದರು. ಸಭೆಯಲ್ಲಿ ಯುವ ಮುಖಂಡ ಅನಿಲ ಮೆಣಸಿನಕಾಯಿ, ಡಾ. ಪ್ರಕಾಶ ಸಂಕನೂರ, ರಾಜು ಕುರಡಗಿ, ಕಾಂತಿಲಾಲ ಬನ್ಸಾಲಿ, ವೀರೇಶ ಕೂಗು, ಚಂದ್ರು ಬಾಳಿಹಳ್ಳಿಮಠ ಸೇರಿದಂತೆ ಶಿಕ್ಷಕರು, ಪದವೀಧರ ಮತದಾರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net