

ಹೂವಿನಹಡಗಲಿ: ರಾಜ್ಯ ಸರ್ಕಾರ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡದಿರುವುದನ್ನು ಖಂಡಿಸಿ ಬಿಜೆಪಿಯಿಂದ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ರೈತ ಪರವಾದ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ. ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಈಟಿ.ಲಿಂಗರಾಜ ಮಾತನಾಡಿ, ರೈತರು ದಿನ ಬೆಳಗಾದರೆ ಸಾಕು ಒಬ್ಬರಿಗೊಬ್ಬರು ಬಡದಾಡಿಕೊಂಡು ರಸಗೊಬ್ಬರ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ. ಖಾಸಗಿ ಕಂಪನಿಯವರ ಬಳಿ ಸರ್ಕಾರ ಹೊಂದಾಣಿಕೆ ಮಾಡಿಕೊಂಡು ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾರ್ಯದರ್ಶಿ ಭಾಗ್ಯಮ್ಮ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ, ಮಾಜಿ ಅಧ್ಯಕ್ಷ ಬಿರಬ್ಬಿ ಬಸವರಾಜ್, ಯುವಮೋರ್ಚಾ ತಾಲೂಕು ಅಧ್ಯಕ್ಷ ಪುನೀತ್‌ದೊಡ್ಡಮನಿ, ಪ್ರಮುಖರಾದ ಓದೋಗಂಗಪ್ಪ, ಕೊಟ್ರೇಶ್‌ನಾಯ್ಕ, ಹಾಲೇಶ್ ಗಳಗನಾಥ, ಸುರೇಶ್, ವಿನೋದ್, ಶಂಕರ್ ಇತರರಿದ್ದರು.