ಸಂಗೀತ ಮತ್ತು ಸಾಹಿತ್ಯ ಮನುಷ್ಯನ ನಾಡಿ ಮಿಡಿತ : ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ

music university
Published on

ಮೈಸೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯದಲ್ಲಿ ಗುರುವಾರ ಶ್ರೀ ತ್ಯಾಗರಾಜ, ಶ್ರೀ ಪುರಂದರದಾಸ ಮತ್ತು ಶ್ರೀ ಕನಕದಾಸರ ಆರಾಧನಾ ಮಹೋತ್ಸವ ಕಾರ್ಯಕ್ರಮ ನಡೆಯಿತು.

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಮಾತನಾಡಿ, ಸಂಗೀತ ಮತ್ತು ಸಾಹಿತ್ಯ ಮನುಷ್ಯನಿಗೆ ಎಲ್ಲ ಕಾಲಕ್ಕೂ ಅವಶ್ಯಕ, ಇವೆರಡು ಮನುಷ್ಯನ ನಾಡಿಮಿಡಿತ ಇದ್ದ ಹಾಗೆ. ಸಂಗೀತ ಮತ್ತು ಸಾಹಿತ್ಯ ಬೆಳೆಸುವಲ್ಲಿ ದಾಸರು, ಶರಣರ ಕೊಡುಗೆ ಅಪಾರವಾದದ್ದು ಎಂದರು.

ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಮಾತನಾಡಿ, ಶಾಸ್ತ್ರೀಯ ಸಂಗೀತ, ಕಲೆಗಳನ್ನು ಉಳಿಸಲು ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳು ಹೆಚ್ಚಾಗಿ ನಡೆಯಬೇಕು. ಅದೇ ರೀತಿ ಕೃತಿಗಳು, ರಚನೆಗಳು ಸಂಗ್ರಹಾಲಯದಲ್ಲಿ ಸಂರಕ್ಷಿಸಲ್ಪಡಬೇಕು ಎಂದು ಹೇಳಿದರು.

ನಗರದ ಶ್ರೀ ಅವಧೂತ ದತ್ತಪೀಠದ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಸಂಗೀತ ವಿವಿಯಿಂದ ಗೌರವ ಡಾಕ್ಟರೇಟ್ ನೀಡಲು ಶಿಾರಸು ವಾಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net