ಸಂಗೀತ ವಿವಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Published on

ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳನ್ನು ನಡೆಸಲು ಶಿಕ್ಷಣ ಸಂಸ್ಥೆಗಳು ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದ್ದು, ಜು. 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ, ಹಿಂದುಸ್ತಾನಿ ಸಂಗೀತ, ನೃತ್ಯ, ನಾಟಕ, ಜಾನಪದಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನ ಎಲ್ಲ ಸ್ನಾತಕ, ಸ್ನಾತಕೋತ್ತರ, ಡಿಪ್ಲೊಮಾ, ಪಿಜಿ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ನಡೆಸಲು ಶಿಕ್ಷಣ ಸಂಸ್ಥೆ, ಕೇಂದ್ರ, ರಾಜ್ಯ ಸರ್ಕಾರದ ಅನುದಾನಿತ ಸಂಸ್ಥೆಗಳು, ಸಂಘ, ಸಂಸ್ಥೆಗಳು ಮತ್ತು ಟ್ರಸ್ಟ್‌ಗಳು ಅಧಿನಿಯಮದಲ್ಲಿ ನೋಂದಾಯಿತ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಸೇರಿದಂತೆ ಇನ್ನಿತರ ಮಾಹಿತಿ ಪಡೆಯಲು ಆಸಕ್ತರು ವಿಶ್ವವಿದ್ಯಾಲಯದ ವೆಬ್‌ಸೈಟ್ ಡಿಡಿಡಿ.ಞ್ಠಜ್ಚ್ಠ್ಞಿಜಿಛ್ಟಿಜಿಠಿ.ಚ್ಚ.ಜ್ಞಿ ಅನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net