ಸಂಗೀತ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಸಂದರ್ಶನ

26BGMYSMUSICUNIVERSITY
Published on

ಮೈಸೂರು: 2024-25ನೇ ಶೈಕ್ಷಣಿಕ ಸಾಲಿಗೆ ಆಂಗ್ಲ ಭಾಷಾ ವಿಭಾಗ, ಕರ್ನಾಟಕ ಸಂಗೀತ ಗಾಯನ ವಿಭಾಗ ಹಾಗೂ ಹಿಂದೂಸ್ತಾನಿ ಸಂಗೀತ ಗಾಯನ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗೆ ನ.5ರಂದು ಬೆಳಗ್ಗೆ 11.30ಕ್ಕೆ ನೇರ ಸಂದರ್ಶನವನ್ನು ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.

ನೆಟ್, ಕೆ-ಸೆಟ್ ಉತ್ತೀರ್ಣರಾದವರು ಅಥವಾ ಕೋರ್ಸ್‌ವರ್ಕ್‌ನೊಂದಿಗೆ ಪಿಎಚ್.ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net