ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಇಂಟರ್‌ಲಾಕ್ ಕಾಮಗಾರಿಗೆ ಚಾಲನೆ

9
Published on

ಮೈಸೂರು: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿ ಅಂದಾಜು 10 ಲಕ್ಷ ರೂ. ವೆಚ್ಚದಲ್ಲಿ ಇಂಟರ್‌ಲಾಕ್ ಕಾಮಗಾರಿಗೆ ಇತ್ತೀಚೆಗೆ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಗರ್ಜನೆಯಿಂದ ಆಯೋಜಿಸಿದ್ದ ಸ್ವಾತಂತ್ರೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ, ಮೇಯರ್ ಶಿವಕುಮಾರ್ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಉಪ ಮೇಯರ್ ರೂಪಾ, ನಗರಪಾಲಿಕೆ ಮಾಜಿ ಸದಸ್ಯ ಕೆ.ಜೆ.ರಮೇಶ್, ಮುಖಂಡರಾದ ರಾಜಶೇಖರ್, ದೊಡ್ಡಣ್ಣ ಮೌರ್ಯ, ಭಾನುಪ್ರಕಾಶ್, ಅಪ್ಪುಗೌಡ, ಕ್ಯಾಂಟೀನ್ ನಾಗಣ್ಣ, ಶಿವರಾಮ್, ಪುನೀತ್‌ರಾಯಣ್ಣ, ಮಹೇಂದ್ರ, ಕೃಷ್ಣನಾಯಕ, ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net