ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ

21mkh1
ರಾಯಣ್ಣನ ಖಡ್ಗ ಹಿಡಿದ ಕೈ ಮುರಿದಿರುವುದನ್ನು ಪೊಲೀಸ್ ಅಧಿಕಾರಿಗಳು ಪರಿಶೀಲಿಸಿದರು.
Published on

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಸಂಗೊಳ್ಳಿ ರಾಯಣ್ಣ ಸರ್ಕಲ್ದಲ್ಲಿ ಸ್ಥಾಪಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ರಾಯಣ್ಣನ ಮೂರ್ತಿಯ ಖಡ್ಗ ಹಿಡಿದ ಕೈ ಮುರಿದಿದೆ. ಕಿಡಿಗೇಡಿಗಳ ಕೃತ್ಯ ಇರಬಹುದೆಂದು ಶಂಕಿಸಲಾಗಿದ್ದು, ಸ್ಥಳದಲ್ಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮರಾ ಇಲ್ಲದ್ದರಿಂದ ಘಟನೆ ಹೇಗಾಯಿತು ಎಂದು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಬೈಲಹೊಂಗಲ ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ಕಲ್ಯಾಣಶೆಟ್ಟಿ, ಕಿತ್ತೂರು ಪಿಎಸ್‌ಐ ರಾಜು ಮಮದಾಪುರ, ಎಎಸ್‌ಐ ಗಂಗಾಧರ ಹಂಪನ್ನವರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸರ್ಕಲ್ನಲ್ಲಿ ಸಿಸಿಟಿವಿ ಅಳವಡಿಸಲು ಸೂಚಿಸಿದ್ದು, ಪೊಲೀಸ್ ಸಿಬ್ಬಂದಿ ನೇಮಿಸಿದ್ದಾರೆ.
ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಎಲ್ಲ ಸಮುದಾಯದ ಜನ ಒಗ್ಗಟ್ಟಿನಿಂದ ಬದುಕುತ್ತಿದ್ದು, ಅಹಿತಕರ ಹಾಗೂ ಕಿಡಿಗೇಡಿತನದ ಕೃತ್ಯಗಳು ನಡೆಯದಂತೆ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net