ಸಂಘಗಳ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ

14KMD-1
Published on

ಕೆ.ಎಂ.ದೊಡ್ಡಿ: ಸಹಕಾರ ಸಂಘಗಳ ಅಭಿವೃದ್ಧಿಗೆ ಸದಸ್ಯರ ಸಹಕಾರ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಮಧು ಜಿ.ಮಾದೇಗೌಡ ತಿಳಿಸಿದರು.

ಇಲ್ಲಿನ ಭಾರತೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಆವರಣದಲ್ಲಿ ಭಾರತೀ ವಿವಿಧೋದ್ದೇಶ ಸಹಕಾರ ಸಂಘ ಮತ್ತು ಭಾರತೀನಗರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಆಯೋಜಿಸಿದ್ದ ಸಹಕಾರ ಸಪ್ತಾಹ-2024 ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗ್ರಾಹಕರಿಗೆ ಆರ್ಥಿಕ ಮುಗ್ಗಟ್ಟು ಎದುರಾದಾಗ ಸಹಕಾರ ಸಂಘಗಳು ಆರ್ಥಿಕ ನೆರವು ನೀಡುತ್ತವೆ. ಅದನ್ನು ಸದುಪಯೋಗಪಡಿಸಿಕೊಂಡು ಮತ್ತೆ ಮರುಪಾವತಿಯಲ್ಲಿ ಕಾಳಜಿ ವಹಿಸಿದರೆ ಅಂತಹ ಸಹಕಾರ ಸಂಘಗಳು ಅಭಿವೃದ್ಧಿ ಹೊಂದುತ್ತವೆ ಎಂದು ಹೇಳಿದರು.

ಭಾರತೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಿ 14 ವರ್ಷಗಳಾಗಿವೆ. ಸೊಸೈಟಿಯು ಉತ್ತಮವಾಗಿ ಕಾರ್ಯನಿವರ್ರ್ಹಿಸುತ್ತ ಗ್ರಾಹಕರಿಗೆ ಡಿಜಿಟಲ್ ಸೇವೆಯೊಂದಿಗೆ ವಿವಿಧ ರೀತಿಯ ಜನಪರ ಕಾರ್ಯಗಳನ್ನು ಮಾಡುತ್ತ ಈ ವ್ಯಾಪ್ತಿಯಲ್ಲಿ ಉತ್ತಮ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.

ಬಿಇಟಿ ಟ್ರಸ್ಟ್ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಸೊಸೈಟಿಯ ಸಿಇಒ ಪ್ರೊ.ಎಸ್.ನಾಗರಾಜು, ನಿರ್ದೇಶಕರಾದ ಡಾ.ತಮಿಜ್‌ಮಣಿ, ಡಾ.ಎಸ್.ಎಲ್.ಸುರೇಶ್, ಜಿ.ಕೃಷ್ಣ, ನಾಗಮಾದಯ್ಯ, ಪ್ರತಿಮಾ, ಮದ್ದೂರು ಅವಿನಾಶ್, ಲೆಕ್ಕಿಗ ಬಿ.ಪಿ. ಪ್ರಮೋದ್, ಅನಿತಾ, ಸಹನಾ, ರಾಜಶೇಖರ್, ನಿಖಿಲ್‌ಕುಮಾರ್, ಜಿ.ಬಿ.ಮಧು ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net