ಸಂಘಟನಾ ಶಕ್ತಿ ಹೆಚ್ಚಿಸುವ ಗಣೇಶೋತ್ಸವ

29sgr1
ಸಾಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ವೀರಶೈವ ಯುವ ವೇದಿಕೆಯಿಂದ 52ನೇ ವರ್ಷದ ಗಣೇಶೋತ್ಸವ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬಸವರಾಜ ಗುಂಡಾಲಿ ಮಾತನಾಡಿದರು. ಸಿ.ಎಚ್.ಗುರುಪ್ರಸಾದ್, ಕವಿತಾ ಜಯಣ್ಣ ಇತರರಿದ್ದರು.
Published on

ಸಾಗರ: ಸಂಘ ಸಂಸ್ಥೆಗಳ ಸಂಘಟನಾ ಸಾಮರ್ಥ್ಯವನ್ನು ಸಾರ್ವಜನಿಕ ಗಣೇಶೋತ್ಸವ ಹೆಚ್ಚಿಸುತ್ತದೆ ಮತ್ತು ಸಾಮಾಜಿಕ ಸೇವೆ ಮಾಡಲು ಪ್ರೇರೆಪಿಸುತ್ತದೆ ಎಂದು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ ಗುಂಡಾಲಿ ಹೇಳಿದರು.

ವೀರಶೈವ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ವೀರಶೈವ ಯುವ ವೇದಿಕೆಯಿಂದ 52ನೇ ವರ್ಷದ ಗಣೇಶೋತ್ಸವ ಅಂಗವಾಗಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಧಾರ್ಮಿಕ ಉತ್ಸವಗಳು ನಮ್ಮನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಯುವ ವೇದಿಕೆ ಉತ್ತಮ ಕೆಲಸ ಮಾಡುತ್ತಿದೆ. ಹೆಚ್ಚು ಜನರು ರಕ್ತದಾನ ಮಾಡಲು ಆಸಕ್ತಿ ತೋರಿದ್ದು, ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಸಹಯೋಗದೊಂದಿಗೆ ಆರೋಗ್ಯ ಉಚಿತ ತಪಾಸಣೆ ನಡೆಸಿ ಉಚಿತ ಔಷಧ ಸಹ ವಿತರಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ವೀರಶೈವ ಯುವಕ ಸಂಘದ ಗೌರವಾಧ್ಯಕ್ಷ ಸಿ.ಎಚ್.ಗುರುಪ್ರಸಾದ್ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠ ಕಾರ್ಯ. ಇನ್ನೊಬ್ಬರ ಜೀವ ಉಳಿಸಲು ಸಾಧ್ಯ. ಇಂತಹ ಸಮಾಜಮುಖಿ ಚಟುವಟಿಕೆಗಳನ್ನು ಹೆಚ್ಚು ಆಯೋಜಿಸಬೇಕು ಎಂದು ತಿಳಿಸಿದರು.

ಅಕ್ಕನ ಬಳಗದ ಮಾಜಿ ಅಧ್ಯಕ್ಷೆ ಕವಿತಾ ಜಯಣ್ಣ, ವೀರಶೈವ ಯುವಕ ಸಂಘದ ಅಧ್ಯಕ್ಷ ಡಿ.ಆರ್.ಶರಣೇಶ್, ಬಿ.ಸಿ.ಶಶಿಧರ, ಯೋಗೇಶ್, ಶಂಭುಲಿಂಗ, ಮಧು ಮಲ್ಲಿಕಾರ್ಜುನ ಕೋರಿ, ಡಾ. ಬಸವರಾಜ್, ಡಾ. ಸುಪ್ರೀತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net