ಸಂಘಟನೆ ಬಲಿಷ್ಠತೆಗೆ ಒತ್ತು ನೀಡಿ

BJP
Published on

ಬೀದರ್: ಬಿಜೆಪಿ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ ಹೊಸ ಪದಾಧಿಕಾರಿಗಳು ನೇಮಕಗೊಂಡಿದ್ದಾರೆ. ಎಲ್ಲರೂ ಸೇರಿ ಪಕ್ಷ ಸಂಘಟನೆಗೆ ಆದ್ಯತೆ ಕೊಡಬೇಕು ಎಂದು ಸಂಸದ ಭಗವಂತ ಖೂಬಾ ಅವರು ಹೇಳಿದರು.

ಸೋಮವಾರ ನೌಬಾದ್ ಹತ್ತಿರದ ಕಲ್ಯಾಣ ಮಂಟಪದಲ್ಲಿ ಜರುಗಿದ ಪಕ್ಷದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲೇ ಬಿಜೆಪಿ ಅತೀ ದೊಡ್ಡ ಸದಸ್ಯರನ್ನು ಹೊಂದಿರುವ ಪಕ್ಷವಾಗಿದೆ. ಇಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿ. ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಘಟನೆ ಬಲಿಷ್ಠತೆಗೆ ಶ್ರಮಿಸಬೇಕು ಎಂದರು.

ಪ್ರತಿಯೊಬ್ಬರೂ ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಬೇಕು. ರಾಜ್ಯ ಹಾಗೂ ಕೇಂದ್ರದಲ್ಲಿ ಪಕ್ಷ ಆಡಳಿತದಲ್ಲಿದ್ದು, ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ತೂಗಾಂವಕರ್, ಸಹ ಸಂಘಟನಾ ಕಾರ್ಯದರ್ಶಿ ಸೂರ್ಯಕಾಂತ ಢೋಣೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅರಹಂತ ಸಾವಳೆ, ಅಶೋಕ ಹೊಕ್ರಾಣೆ, ಮಲ್ಲಿಕಾರ್ಜುನ ಕುಂಬಾರ, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಶಿವರಾಜ ಗಂದಗೆ, ಜಯಕುಮಾರ ಕಾಂಗೆ, ಬಸವರಾಜ ಜೋಜನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net