ಸಂಘದಿಂದ ಸಮಾಜಮುಖಿ ಸೇವಾ ಕಾರ್ಯ

27M.D.R.2
Published on

ಮದ್ದೂರು: ಸರ್ಕಾರಿ ನಿವೃತ್ತ ನೌಕರರ ಸಂಘ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಂಡು ಎಲ್ಲ ವರ್ಗದ ಜನರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿವೇಕಾನಂದ ತಿಳಿಸಿದರು.
ತಾಲೂಕಿನ ಕೊಪ್ಪ ಹೋಬಳಿ ಸರ್ಕಾರಿ ನಿವೃತ್ತ ನೌಕರರ ಸಂಘ, ಸರ್ವೋದಯ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಶನಿವಾರ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶ್ರೀಕಂಠಯ್ಯ ಮಾತನಾಡಿ, ನೌಕರರ ಸಂಘದಲ್ಲಿ 240ಕ್ಕೂ ಹೆಚ್ಚು ಷೇರುದಾರರಿದ್ದಾರೆ. ಪ್ರತಿ ವರ್ಷ 3 ಲಕ್ಷ ರೂ. ವಹಿವಾಟು ನಡೆಸಲಿರುವ ಸಂಘವು, ಆರ್ಥಿಕವಾಗಿ ಸದೃಢವಾಗಿದೆ ಎಂದು ಹೇಳಿದರು.
ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಬಿ.ಜೆ.ಮಂಗೇಗೌಡ ಮಾತನಾಡಿ, ನಿವೃತ್ತ ಸರ್ಕಾರಿ ನೌಕರರ ಸಂಘಕ್ಕೆ ಸ್ಥಳ ಮಂಜೂರು ಮಾಡಲು ತಹಸೀಲ್ದಾರ್ ಮೀನಮೇಷ ಎಣಿಸುತ್ತಿದ್ದಾರೆ. ತಕ್ಷಣವೇ ಸ್ಥಳ ಮಂಜೂರು ಮಾಡದಿದ್ದರೆ ಕೊಪ್ಪ ಹೋಬಳಿಯ ನಿವೃತ್ತ ನೌಕರರ ಜತೆಗೂಡಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net