ಸಂಚಾರ ಪೊಲೀಸರಿಗೆ ತರಬೇತಿ

10 (2)
Published on

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ತಯಾರಿ ನಡೆಸುತ್ತಿದ್ದಾರೆ.

ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆ ವತಿಯಿಂದ ಟ್ರಾಫಿಕ್ ಸಿಗ್ನಲ್ ಕುರಿತು ಸಂಚಾರ ಪೊಲೀಸರಿಗೆ ಪುನಶ್ಚೇತನ ಶಿಬಿರ ಭಾನುವಾರ ನಡೆಯಿತು. ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕಾರ್ಯಕ್ರಮ ಅಯೋಜಿಸಲಾಗಿತ್ತು.


ದಸರಾ ಸಂದರ್ಭದಲ್ಲಿ ಸಾಂಸ್ಕೃತಿಕ, ಕಲೆ, ಕ್ರೀಡೆ ಸೇರಿದಂತೆ ಹತ್ತಾರು ಕಾರ್ಯಕ್ರಮಗಳು ನಗರದ ವಿವಿಧ ಸ್ಥಳಗಳಲ್ಲಿ ನಡೆಯುತ್ತವೆ

. ಇದನ್ನು ವೀಕ್ಷಣೆಗೆ ಸಾವಿರಾರು ಜನರು ಮೈಸೂರಿಗೆ ಬರುತ್ತಾರೆ. ಈ ಸಂದರ್ಭದಲ್ಲಿ ಜನ ಮತ್ತು ವಾಹನ ದಟ್ಟಣೆ ಹೆಚ್ಚಾಗುತ್ತದೆ. ಇದನ್ನು ಸಂಚಾರ ಪೊಲೀಸರು ನಿಭಾಯಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ತರಬೇತಿ ನೀಡಿ ಸಜ್ಜುಗೊಳಿಸಲಾಯಿತು.


ನಗರ ಸಂಚಾರ ಪೊಲೀಸ್ ವಿಭಾಗದ ಎಸಿಪಿ ಪರುಶುರಾಮಪ್ಪ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಮೊಹಮ್ಮದ್ ಇರ್ಷಾದ್ ನೇತೃತ್ವದಲ್ಲಿ ಎಎಸ್‌ಪಿ ಸುರೇಶ್ ತರಬೇತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net