ಸಂಚಾರಿ ಪೊಲೀಸರಿಂದ ಜಾಗೃತಿ

2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ದಂಡದಲ್ಲಿ ಶೇ. 50 ದಂಡ ರಿಯಾಯಿತಿ ನೀಡಲಾಗಿದೆ. ಈ ಬಗ್ಗೆ ಸಂಚಾರಿ ಠಾಣೆ ಪೊಲೀಸರು ನಗರದ ಮಾರುಕಟ್ಟೆ ಪ್ರದೇಶದಲ್ಲಿ ಜಾಗೃತಿ ಮೂಡಿಸಿದರು. ವಾಹನ ಸವಾರರು ದಂಡ ರಿಯಾಯಿತಿಯ ಪ್ರಯೋಜನ ಪಡೆಯಬೇಕು ಎಂದು ತಿಳಿಹೇಳಿದರು. ಇನ್‌ಸ್ಪೆಕ್ಟರ್ ಮಲ್ಲನಗೌಡ ನಾಯ್ಕರ್ ಮಾರ್ಗದರ್ಶನದಲ್ಲಿ ಎಎಸ್‌ಐ ವೀರೇಶ ಬಳ್ಳಾರಿ, ಸಿಬ್ಬಂದಿ ಬಸಯ್ಯ ಜಿ.ಎಸ್., ಬಾಬು ಸವದತ್ತಿ, ಅಶ್ಪಾಕಲಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net