ಸಂಜೀವಿನಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

ಸಂಜೀವಿನಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟನೆ
Published on

ಹಾಸನ: ನಗರದ ಸಂಜೀವಿನಿ ಸಹಕಾರಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಆಫ್ ಹಾಸನ, ಹೊಯ್ಸಳ ರೋಟರಿ ಕ್ಲಬ್, ಯುಎಸ್‌ಎ ಹಾಲಿಸ್ ಬ್ರೂಕ್‌ಲೈನ್ ಗ್ಲೋಬಲ್ ಸಹಯೋಗದಲ್ಲಿ ಗ್ಯಾಂಟ್ ಪ್ರಾಜೆಕ್ಟ್‌ನ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಲಾಯಿತು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಡಯಾಲಿಸಿಸ್ ಕೇಂದ್ರ ಅತ್ಯವಶ್ಯವಾಗಿದೆ. ಕಿಡ್ನಿ ಸೇರಿ ಹಲವು ಸಮಸ್ಯೆಯಿಂದ ಬಳಲುವ ರೋಗಿಗಳಿಗೆ ಈ ಯೋಜನೆ ನೆರವಾಗಲಿದೆ. ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ (3182ರ) ಜಿಲ್ಲಾ ಗವರ್ನರ್ ಬಿ.ಸಿ.ಗೀತಾ ಅವರು ಕೇಂದ್ರ ಉದ್ಘಾಟಿಸಿದರು. ಅಂತರರಾಷ್ಟ್ರೀಯ ಪ್ರಾಯೋಜಕ ವೇಣುರಾವ್, ಜಿಲ್ಲಾ ರೋಟರಿ ಫೌಂಡೇಶನ್ ಅಧ್ಯಕ್ಷ ಡಾ.ಪಿ.ನಾರಾಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net