

ಬಾಗಲಕೋಟೆ: ಸಂತ ಸೇವಾಲಾಲ್ ಜಯಂತಿ ಅಂಗವಾಗಿ ಗುರುವಾರ ಜಿಲ್ಲಾಡಳಿತ ಭವನದಲ್ಲಿ ಸೇವಾಲಾಲ್‍ರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಜಾನಕಿ ಕೆ ಎಮ್. ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಮರೇಶ ನಾಯಕ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹೂವಪ್ಪ ರಾಠೋಡ್, ನ್ಯಾಯವಾಧಿ ರಾಜು, ಬಲರಾಮ ನಾಯಕ ಸೇರಿದಂತೆ ಸಮುದಾಯದ ಇತರ ಬಾಂದವರು ಇದ್ದರು.