ಸಂತಪುರ ಎಸ್​ಬಿಐ ಸಿಬ್ಬಂದಿಗೆ ತರಾಟೆ

19-6aurad31
Published on

ಔರಾದ್: ಸಂತಪುರ ಎಸ್ಬಿಐ ಸಿಬ್ಬಂದಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಗುರುವಾರ ಜರುಗಿದೆ.
ದಲಿತ ಸಂಘರ್ಷ ಸಮಿತಿ ಮುಖಂಡ ಧನರಾಜ ಮುಸ್ತಾಪುರೆ ಸೇರಿ ಹಲವರು ಶಾಖೆಗೆ ತೆರಳಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಕರೊನಾ ಹಿನ್ನೆಲೆಯಲ್ಲಿ ಹಲವಾರು ಗ್ರಾಮಗಳ ರೈತರಿಗೆ ಸರ್ಕಾರ ವಿವಿಧ ಯೋಜನೆಗಳಡಿ ಹಣ ಜಮೆ ಮಾಡಿದೆ. ಕೈಯಲ್ಲಿ ಕೆಲಸವಿಲ್ಲದೆ ಜನ ಹೈರಾಣಾಗಿ ಅನೇಕ ಸಮಸ್ಯೆ ಹೊತ್ತು ಬ್ಯಾಂಕ್ಗೆ ಬಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ರೀತಿಯ ಮಾಹಿತಿ ನೀಡದೆ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದಾರೆ ಎಂದು ದೂರಿದರು. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಜನರಿಗೆ ಸೇವೆ ನೀಡಬೇಕು. ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಒಂದು ಗಂಟೆಗೂ ಹೆಚ್ಚಿನ ಕಾಲ ಸಾರ್ವಜನಿಕರು ಮತ್ತು ಬ್ಯಾಂಕ್ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಅಧಿಕಾರಿಗಳು ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸೇವೆ ನೀಡುತ್ತೇವೆ ಎಂದು ಭರವಸೆ ನೀಡಿದ ನಂತರ ಪರಿಸ್ಥಿತಿ ತಿಳಿಯಾಯಿತು. ಪ್ರಮುಖರಾದ ನಾಗಶೆಟ್ಟಿ ಗಾದಗೆ, ಗಣಪತಿ ವಾಸುದೇವ, ಸುಭಾಷ ಲಾಧಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net