

ಸುಂಟಿಕೊಪ್ಪ: ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯ (14 ವರ್ಷದೊಳಗಿನ) ಬಾಲಕಿಯರ ತಂಡವು ಜಿಲ್ಲಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ಸೋಮವಾರದಂದು ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯಲ್ಲಿ ಟೇಬಲ್ ಟೆನಿಸ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಪಂದ್ಯಾವಳಿಯಲ್ಲಿ ಜಿಲ್ಲೆಯ 5 ತಾಲೂಕುಗಳ ತಂಡಗಳು ಭಾಗವಹಿಸಿದ್ದವು. ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಮಡಿಕೇರಿ ತಾಲೂಕು ತಂಡವನ್ನು ಸೋಲಿಸುವ ಮೂಲಕ ಪ್ರಶಸ್ತಿ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದೆ.