ಸಂತರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ

14 SARAG 3
filter: 0; fileterIntensity: 0.000000; filterMask: 0; captureOrientation: 0; shaking: 0.000000; highlight: 0; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 32;
Published on

ಸರಗೂರು: ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಯುವ ಪೀಳಿಗೆಗೆ ಪರಿಚಯಸಲು ಮುಂದಾಗಬೇಕು ಎಂದು ಭೋವಿ ಸಮಾಜದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಹೇಳಿದರು.

ತಾಲೂಕಿನ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಶ್ರೀ ಸಿದ್ದರಾಮೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿವಯೋಗಿ ಸಿದ್ದರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ದರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರು. ಬಸವಣ್ಣನವರು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು. ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯ ಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರ ಮಾತನಾಡಿ, 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದುದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ವಿಶೇಷ. ಮುಂದಿನ ತಿಂಗಳು ವಿಜೃಂಭಣೆಯಿಂದ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.

ಭೋವಿ ಸಮಾಜದ ಗೌರವಾಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ರವಿಕುಮಾರ್, ಪುರಸಭೆ ಸದಸ್ಯ ಸೋಮಶೇಖರ್, ಪಪಂ ಮಾಜಿ ಸದಸ್ಯ ನಾಗೇಂದ್ರ, ಸಂಘಟನಾ ಕಾರ್ಯದರ್ಶಿ ರಘು, ವೆಂಕಟರಾಮ್, ಕಾರ್ಯದರ್ಶಿ ಕಂದಸ್ವಾಮಿ, ಖಜಾಂಚಿ ರಾಮಕೃಷ್ಣ, ಮುಖಂಡರಾದ ಬಸಪ್ಪ, ವೆಂಕಟರಾಮು, ವೆಂಕಟರಾಮ, ಕೃಷ್ಣ ಭೋವಿ, ನಾಗರಾಜು, ಶೇಖರ್, ವೀರಭದ್ರ ಭೋವಿ, ಪ್ರಕಾಶ್, ಕಾಳಪ್ಪ, ಭೋಜಣ್ಣ, ಕೃಷ್ಣಪ್ಪ, ಶಿವಪುರ ನಾಗರಾಜು, ರಘು ಹೊಮ್ಮರಗಳ್ಳಿ ,ಪಾಳ್ಯ ಶ್ರೀನಿವಾಸ, ನಾಗರಾಜು, ನಿಂಗಣ್ಣ, ನಾಗರಾಜು, ಉಪತಹಸೀಲ್ದಾರ್ ಮನೋಹರ್, ರವಿಚಂದ್ರ, ಚಂದ್ರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net