

ಚಿತ್ರದುರ್ಗ: ಹಿಂಜರಿಕೆ, ಸಂಕೋಚ ಭಯ ಬಿಟ್ಟು ಪುರುಷರು ಎನ್‌ಎಸ್‌ವಿ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವ ಮೂಲಕ ಮಹಿಳೆಯರಿಗೆ ಸಮಾನತೆ ನೀಡಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನಾಧಿಕಾರಿ ಡಾ.ರೇಖಾ ಹೇಳಿದರು.
ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ವ್ಯಾಸೆಕ್ಟಮಿ ಪಾಕ್ಷಿಕದಲ್ಲಿ ಮಾತನಾಡಿದರು.
ನ.21ರಿಂದ 28 ರವರೆಗೆ ಸಪ್ತಾಹದ ಮೂಲಕ ಎನ್‌ಎಸ್‌ವಿ ಕುಟುಂಬ ಕಲ್ಯಾಣ ಯೋಜನೆ ಕುರಿತು ಪುರುಷ ಸಮುದಾಯದಲ್ಲಿ ಅರಿವು ಮೂಡಿಸಲಾಗುತ್ತಿದೆ. ಈ ಸಪ್ತಾಹದ ಅಂಗವಾಗಿ ನ.28ರಿಂದ ಡಿ.4 ರವರೆಗೆ ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ ಸೌಲಭ್ಯವನ್ನು ಎಲ್ಲ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಏರ್ಪಡಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪುರುಷರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ನಾವಿಂದು ಸಂವಿಧಾನ ದಿನ ಆಚರಿಸಿದ್ದೇವೆ. ಕುಟುಂಬದ ಜವಾಬ್ದಾರಿ ಹೊತ್ತಿರುವ ಮಹಿಳೆಯರಲ್ಲಿ ಸಮಾನತೆ ಭಾವ ಮೂಡಿಸಬೇಕಿದೆ ಎಂದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜೆ. ಗೌರಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿದರು.
ಪುರುಷ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಹಿತಿ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು. ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿಗ ಳಾದ ಕಾತ್ಯಾಯನಮ್ಮ,ತಿಪ್ಪಮ್ಮ,ವ್ಯವಸ್ಥಾಪಕ ಮಹಮ್ಮದ್‌ಅಲಿ,ಹಬೀಬ್,ನಾಗವೇಣಿ,ಆಶಾ ಬೋಧಕಿ ತಬೀತಾ, ಪ್ರತಿಭಾ ಇತರರು ಇದ್ದ ರು.