ಚಾಮರಾಜನಗರ: ತಾಲೂಕಿನ ಸಂತೇಮರಹಳ್ಳಿ ಮನೆಯೊಂದರ ಬೀಗ ಮುರಿದು ಚಿನ್ನ ಮತ್ತು ಹಣವನ್ನು ಕಳ್ಳರು ದೋಚಿದ್ದಾರೆ.
ಜನತಾ ಕಾಲೋನಿಯ ನಿವಾಸಿ ರಂಗಸ್ವಾಮಿ ಎಂಬುವವರ ಮನೆಯಲ್ಲಿ ಶುಕ್ರವಾರ ರಾತ್ರಿ ಮನೆಯ ಬೀಗವನ್ನು ಒಡೆದು ಮನೆಯಲ್ಲಿದ್ದ 24 ಗ್ರಾಂ ಚಿನ್ನ ಮತ್ತು 55 ಸಾವಿರ ರೂ, ನಗದು ಹಣವನ್ನು ಅಪಹರಿಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.